Saturday, June 6, 2026
Homeಕರಾವಳಿವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಸೇವನೆ; ಇಬ್ಬರನ್ನು ಬಂಧಿಸಿದ ಪೊಲೀಸರು

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಸೇವನೆ; ಇಬ್ಬರನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ರಾಜಾರೋಷವಾಗಿ ಮಾದಕವಸ್ತು ಸೇವನೆ ಮಾಡುತ್ತಿದ್ದ ಇಬ್ಬರು ಬಂಧಿಸಿರುವ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ನಡೆದಿದೆ.ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್ (30), ಕೊಳ್ನಾಡು ಕಾನಭಜನ ನಿವಾಸಿ ಕಬೀರ್ (30) ಬಂಧಿತ ಆರೋಪಿಗಳು.

ವಿಟ್ಲ ಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ಶನಿವಾರ ಬೆಳಗ್ಗೆ ಕೊಳ್ನಾಡು ಗ್ರಾಮದ ಬೊಳ್ಪಾದೆ ಆಟದ ಮೈದಾನದಲ್ಲಿ ಇಬ್ಬರು ಯುವಕರು ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದರೆಂಬ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಂದರ್ಭ ಅಮಲಿನಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದರು. ತಕ್ಷಣ ವಶಕ್ಕೆ ಪಡೆದು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಕಳುಹಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಸಿಬ್ಬಂದಿ ಹೇಮರಾಜ್ ಹಾಗೂ ಇಲಾಖಾ ಜೀಪ್‌ ಚಾಲಕ ಅಶೋಕ್ ಅವರು ಈ ಕಾರ್ಯಾಚರಣೆಯಲ್ಲಿ ಭಾವವಹಿಸಿದ್ದರು.

- Advertisement -

Latest News

error: Content is protected !!