Friday, June 5, 2026
Homeಕರಾವಳಿಬೆಳ್ತಂಗಡಿ:ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆ

ಬೆಳ್ತಂಗಡಿ:ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ; ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೇಣೂರು ಠಾಣಾ ವ್ಯಾಪ್ತಿಯ ಮೂಡುಕೋಡಿಯಲ್ಲಿ ನಡೆದಿದೆ.

ಮೂಡುಕೋಡಿ ಹುರಾಬೆ ಮನೆ ನಿವಾಸಿ ಪೇದ್ರು ಯಾನೆ ಪಿಶಿರ (70) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!