ಪುತ್ತೂರು; ಮನೆಯೊಂದರಿಂದ ವಿವಿಧ ವಸ್ತುಗಳನ್ನು ಕಳವು ಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೂರ್ನಡ್ಕ ನಿವಾಸಿ ಮಹಮ್ಮದ್ ಮುಸ್ತಫ್ಪ (28), ಸವಣೂರು ಚಾಪಳ್ಳ ನಿವಾಸಿ ಶಮೀರ್ (24) ಬಂಧಿತ ಆರೋಪಿಗಳು.
ಎ.ಪಿ.ಎಂ.ಸಿ ರಸ್ತೆಯ ಸೂತ್ರಬೆಟ್ಟು ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವಿವೇಕಾನಂದ ಯಾನೆ ಸತ್ಯನಾರಾಯಣ ಅವರು ಜನವರಿ 4ರಂದು ಸ್ವಂತ ಊರಾದ ಮಧುರೈಗೆ ತಾಯಿಯ ಅಸೌಖ್ಯತೆ ಹಿನ್ನಲೆಯಲ್ಲಿ ತೆರಳಿದ್ದರು. ಅವರ ಅಣ್ಣ ಗೋಪಿನಾಥ ಅವರು ಮನೆಗೆ ಬೀಗ ಹಾಕಿ ಅವರಲ್ಲಿದ್ದ ಒಂದು ಜೊತೆ ಬೀಗದ ಕೀಯನ್ನು ಮನೆಯ ಹೊರಗಡೆ ನಿಲ್ಲಿಸಿದ್ದ ಮೋಟಾರು ಸೈಕಲ್ ನ ಬಾಕ್ಸ್ ನಲ್ಲಿಟ್ಟು, ಇನ್ನೊಂದು ಜೊತೆ ಕೀಯನ್ನು ತಮ್ಮ ಜೊತೆಗೆ ತೆಗೆದುಕೊಂಡು ಹೋಗಿದ್ದರು.
ಜನವರಿ 8 ರಂದು ಬಂದು ನೋಡಿದಾಗ ಮನೆಯ ಬೀಗ ಯಥಾ ಸ್ಥಿತಿಯಲ್ಲಿದ್ದು, ಒಳಗಡೆ ನೋಡಿದಾಗ ಚಾವಡಿ ಮತ್ತು ಬೆಡ್ ರೂಮ್ ನ ಬಟ್ಟೆ ಬರೆಗಳು ಚೆಲ್ಲಾ ಪಿಲ್ಲಿಯಾಗಿದ್ದುದಲ್ಲದೇ ಮನೆಯಲ್ಲಿದ್ದ 18 ಸಾವಿರ ನಗದು ಸೇರಿದಂತೆ ಇತರ ವಸ್ತುಗಳನ್ನು ಕದ್ದು ಪರಾರಿಯಾಗಿದ್ದರು. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದಾರೆ.


