Wednesday, June 3, 2026
Homeತಾಜಾ ಸುದ್ದಿರೈಲ್ವೆ ನಿಲ್ದಾಣದಲ್ಲೇ ಹೃದಯಘಾತವಾಗಿ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

ರೈಲ್ವೆ ನಿಲ್ದಾಣದಲ್ಲೇ ಹೃದಯಘಾತವಾಗಿ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

- Advertisement -
- Advertisement -

ಬೆಂಗಳೂರು : ರೈಲ್ವೆ ನಿಲ್ದಾಣದಲ್ಲೇ ನಿಂತಿದ್ದಾಗ ಹೃದಯಘಾತವಾಗಿ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ (48) ಲಿಂಗೈಕ್ಯರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಹಿರೇಮಠದ ವೀರ ಮಹಾಂತ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಹೃದಯಾಘಾತವಾಗಿದೆ.

ಹೃದಯಾಘಾತಕ್ಕೀಡಾಗಿದ್ದ ಸ್ವಾಮೀಜಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಸ್ವಾಮೀಜಿ ಅವರಿಗೆ ಹೃದಯಘಾತ ಸಂಭವಿಸಿತು. ಅವರ ಜೊತೆಗಿದ್ದ ಭಕ್ತರು ಅವರನ್ನು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡಿದರು, ಆದರೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಹಿರೇಮಠದಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ.

- Advertisement -

Latest News

error: Content is protected !!