Friday, June 5, 2026
Homeಕ್ರೀಡೆಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಆರೋಗ್ಯದಲ್ಲಿ ಏರುಪೇರು

ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಆರೋಗ್ಯದಲ್ಲಿ ಏರುಪೇರು

- Advertisement -
- Advertisement -

ಬೆಂಗಳೂರು : ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ತಪಾಸಣೆಗಾಗಿ ಕೋಲ್ಕತ್ತಾದಿಂದ ನೇರವಾಗಿ ಬೆಂಗಳೂರಿಗೆ ವಾಪಸಾಗಿದ್ದಾರೆ  ಎನ್ನಲಾಗಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಹೋಟೆಲ್‌ನಲ್ಲಿ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಅವರಿಗೆ ವೈದ್ಯರ ವ್ಯವಸ್ಥೆಯನ್ನು ಬಂಗಾಳ ಕ್ರಿಕೆಟ್ ಸಂಸ್ಥೆ (ಸಿಎಬಿ) ಒದಗಿಸಿತ್ತು. ಹೀಗಾಗಿ ರಾಹುಲ್ ಕೊಂಚ ಚೇತರಿಸಿಕೊಂಡರು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಲಿದ್ದಾರೆ. ತಿರುವನಂತಪುರಂನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಶನಿವಾರದ ವೇಳೆಗೆ ದ್ರಾವಿಡ್ ಆರೋಗ್ಯ ಸುಧಾರಿಸಿ, ಅಭ್ಯಾಸಕ್ಕಾಗಿ ತಂಡವನ್ನ ಮತ್ತೆ ಸೇರಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!