Sunday, June 7, 2026
Homeತಾಜಾ ಸುದ್ದಿಮುಂದಿನ ಚುನಾವಣೆಯಲ್ಲಿ ನಾನು ಎರಡು ಕಡೆ ಸ್ಪರ್ಧೆ ಮಾಡುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮುಂದಿನ ಚುನಾವಣೆಯಲ್ಲಿ ನಾನು ಎರಡು ಕಡೆ ಸ್ಪರ್ಧೆ ಮಾಡುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

- Advertisement -
- Advertisement -

ಹಾಸನ : ಮುಂದಿನ ಚುನಾವಣೆಯಲ್ಲಿ ನಾನು ಎರಡು ಕಡೆ ಸ್ಪರ್ಧೆ ಮಾಡುವುದಿಲ್ಲ. ಒಂದೇ ಕಡೆ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆ, ಟೀಕೆಗೆ ಕಾರಣವಾಗಿದೆ. ದೈವವಾಣಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಹಾಸನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ನಾನು ಎರಡೆರಡು ಕಡೆ ಸ್ಪರ್ಧೆ ಮಾಡುವುದಿಲ್ಲ, ಒಂದೇ ಕಡೆ ಮಾಡುವೆ ಎಂದು ಸ್ಪಷ್ಟನೆ ನೀಡಿದರು.

ನಾನು ಎರಡು ಕಡೆ ಸ್ಪರ್ಧೆ ಮಾಡುತ್ತೇನೆ ಎಂಬುದು ನನ್ನ ಪುತ್ರ ಯತೀಂದ್ರನ ಅಭಿಪ್ರಾಯವಾಗಿದೆ. ನಾನು ಏನೇ ಇದ್ದರೂ ಒಂದು ಕಡೆ ಮಾತ್ರ ಸ್ಪರ್ಧೆ ಮಾಡುತ್ತೇನೆ ಎಂದು ನಿರ್ಧಾರ ಮಾಡಿದ್ದೇನೆ. ಯತೀಂದ್ರ ತಂದೆ ಮೇಲಿನ ಪ್ರೀತಿಯಿಂದ ಕ್ಷೇತ್ರದಲ್ಲಿ ನಿಲ್ಲಲಿ ಎಂದು ಕರೆಯುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಂತೆ ಸಿದ್ದರಾಮ್ಯಯ ಅವರ ಮನೆ ದೇವರು ರಾಜಕೀಯ ಭವಿಷ್ಯ ನುಡಿದಿದೆ. ಈ ವಿಚಾರವಾಗಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪಷ್ಟನೆ ಪ್ರತಿಕ್ರಿಯೆ ನೀಡಿದ್ದರು.

- Advertisement -

Latest News

error: Content is protected !!