Saturday, June 6, 2026
Homeಕರಾವಳಿಗಣರಾಜ್ಯೋತ್ಸವ ಪರೇಡ್‌ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸಲಿದ್ದಾರೆ ಮಂಗಳೂರಿನ ದಿಶಾ ಅಮೃತ್

ಗಣರಾಜ್ಯೋತ್ಸವ ಪರೇಡ್‌ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸಲಿದ್ದಾರೆ ಮಂಗಳೂರಿನ ದಿಶಾ ಅಮೃತ್

- Advertisement -
- Advertisement -

ನವದೆಹಲಿ;  ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮಂಗಳೂರಿನ ದಿಶಾ ಅಮೃತ್ ಅವರು ನೌಕಾಪಡೆಯ ತುಕಡಿಯನ್ನು ಮುನ್ನಡೆಸಲಿದ್ದಾರೆ. ನೌಕಾಪಡೆಯ 144 ಸೈನಿಕರನ್ನು ಒಳಗೊಂಡ ತುಕಡಿ ಹಾಗೂ ಸ್ತಬ್ಧಚಿತ್ರವು ಪರೇಡ್ ನಾರಿಶಕ್ತಿಯನ್ನು ಪ್ರದರ್ಶಿಸಲಿದೆ.

ದಿಶಾ ಅಮೃತ್ ಅವರು ಮಂಗಳೂರಿನ ಬೋಳೂರು ಸಮೀಪದ ತಿಲಕ ನಗರದ ನಿವಾಸಿಯಾಗಿದ್ದು, ಅಂಡಮಾನ್ ನಿಕೋಬಾರ್‌ನಲ್ಲಿ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿದ್ದಾರೆ.

ಕೆನರಾ ವಿದ್ಯಾಸಂಸ್ಥೆಯಲ್ಲಿ ಪಿಯುಸಿವರೆಗೆ ವಿದ್ಯಾಭ್ಯಾಸ ಪಡೆದ ದಿಶಾ, ಬಳಿಕ ಬೆಂಗಳೂರು ಬಸವನಗುಡಿಯ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ನಲ್ಲಿ ಬಿ.ಇ ಪದವಿ ಪಡೆದಿದ್ದಾರೆ. ಅವರು 2016ರಲ್ಲಿ ನೌಕಾಪಡೆಗೆ ಆಯ್ಕೆಗೊಂಡಿದ್ದರು.

- Advertisement -

Latest News

error: Content is protected !!