Monday, June 8, 2026
Homeಕರಾವಳಿಮಂಗಳೂರಿನಲ್ಲಿ ದ.ಕ. ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ ಆಚರಣೆ

ಮಂಗಳೂರಿನಲ್ಲಿ ದ.ಕ. ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ ಆಚರಣೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ
ಮಂಗಳೂರಿನ ನೆಹರು ಮೈದಾನದಲ್ಲಿ
ಗಣರಾಜ್ಯೋತ್ಸವ ಆಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.

ಪೊಲೀಸ್, ಎನ್ ಸಿ ಸಿ, ಅಗ್ನಿಶಾಮಕ ದಳ ಮತ್ತು ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಎಸ್ಪಿ ಋಷಿಕೇಶ್ ಸೋನಾವಣೆ, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಕೂಡ ಭಾಗಿಯಾಗಿದ್ದರು.

ಇದೇ ವೇಳೆ ಸರ್ಕಾರಿ ಶಾಲೆಯಲ್ಲಿ ಎಸ್ಎಸ್ ಎಲ್ ಸಿ ಯಲ್ಲಿ ಸಾಧನೆ ಮಾಡಿದ 11 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು.

- Advertisement -

Latest News

error: Content is protected !!