Friday, June 5, 2026
Homeಕರಾವಳಿಉಡುಪಿಕುಂದಾಪುರ: ಬಸ್‌ನಿಂದ ಬಿದ್ದು ಮೃತಪಟ್ಟ ಕಾಲೇಜು ವಿದ್ಯಾರ್ಥಿಯ ನೇತ್ರದಾನ ಮಾಡಿದ ಪೋಷಕರು

ಕುಂದಾಪುರ: ಬಸ್‌ನಿಂದ ಬಿದ್ದು ಮೃತಪಟ್ಟ ಕಾಲೇಜು ವಿದ್ಯಾರ್ಥಿಯ ನೇತ್ರದಾನ ಮಾಡಿದ ಪೋಷಕರು

- Advertisement -
- Advertisement -

ಕುಂದಾಪುರ: ಬಸ್ ನಿಂದ ಬಿದ್ದು ಚಕ್ರದಡಿ ಸಿಲುಕಿ ಮೃತಪಟ್ಟ ಕಾಲೇಜು ವಿದ್ಯಾರ್ಥಿಯ ನೇತ್ರದಾನ ಮಾಡಿ ಪೋಷಕರು ಮಾನವೀಯತೆ ಮೆರೆದಿದ್ದಾರೆ.

ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿಗಳಾದ ನಾಗಪ್ಪ ಪೂಜಾರಿ ಮತ್ತು ಜಲಜಾ ದಂಪತಿಯ ಪುತ್ರ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಇಂದು ಬೆಳಗ್ಗೆ ಹೆಮ್ಮಾಡಿಯ ಜಂಕ್ಷನ್‌ ಬಳಿ ಬಸ್‌ನಿಂದ ಕೆಳಗೆ ಬಿದ್ದು ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದ.  ಈತ ಬಸ್‌ ಫುಟ್‌ ಬೋರ್ಡ್‌ ಮೇಲೆ ನಿಂತು ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ವೈದ್ಯರು ನೇತ್ರದಾನದ ಬಗ್ಗೆ ಪೋಷಕರಿಗೆ ತಿಳಿಸಿ ಮನವರಿಕೆ ಮಾಡಿದ್ರು. ನಂತರ ಪೋಷಕರು ಮಗನ ನೇತ್ರದಾನಕ್ಕೆ ಸಮ್ಮತಿ ಸೂಚಿಸಿ ಮಾನವೀಯತೆ ಮೆರೆದಿದ್ದಾರೆ.

- Advertisement -

Latest News

error: Content is protected !!