Saturday, June 6, 2026
Homeಕರಾವಳಿವಿಟ್ಲ; ಕೀಟನಾಶಕ ಸೇವಿಸಿ ಮಹಿಳೆ ಆತ್ಮಹತ್ಯೆ

ವಿಟ್ಲ; ಕೀಟನಾಶಕ ಸೇವಿಸಿ ಮಹಿಳೆ ಆತ್ಮಹತ್ಯೆ

- Advertisement -
- Advertisement -

ವಿಟ್ಲ: ಕೀಟನಾಶಕ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ತೋಡ್ಲ ನಿವಾಸಿ ದಿ. ಕರುಣಾಕರ ಪೂಜಾರಿಯವರ ಪತ್ನಿ ಶಾಲಿನಿ(38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಶಾಲಿನಿ ಅವರ ಪತಿ ಕೆಲ ವರ್ಷಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರ. ಅವರ ಸಾವಿನ ಬಳಿಕ ಶಾಲಿನಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ನಿನ್ನೆ ಬೆಳಿಗ್ಗೆ ಶಾಲಿನಿ ಮನೆಯಲ್ಲಿ ತೀವ್ರ ಅಸ್ವಸ್ಥರಾಗಿದ್ದರು. ಅವರನ್ನು ಸಂಬಂಧಿಕರು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ  ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ  ಅವರು ಸಾವನ್ನಪ್ಪಿದ್ದಾರೆ.ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

- Advertisement -

Latest News

error: Content is protected !!