Saturday, June 6, 2026
Homeಕರಾವಳಿಮಂಗಳೂರು; ಉಳ್ಳಾಲದಲ್ಲಿ ಭೀಕರ ಕಾರು ಅಪಘಾತ; ಓರ್ವ ಸಾವು, ಇನ್ನೋರ್ವನಿಗೆ ಗಂಭೀರ ಗಾಯ

ಮಂಗಳೂರು; ಉಳ್ಳಾಲದಲ್ಲಿ ಭೀಕರ ಕಾರು ಅಪಘಾತ; ಓರ್ವ ಸಾವು, ಇನ್ನೋರ್ವನಿಗೆ ಗಂಭೀರ ಗಾಯ

- Advertisement -
- Advertisement -

ಮಂಗಳೂರು: ಭೀಕರ ಕಾರು ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಉಳ್ಳಾಲದ ರಾ.ಹೆ. 66 ರ ಕೊಲ್ಯ- ಅಡ್ಕ ಬಳಿ  ನಿನ್ನೆ ತಡರಾತ್ರಿ ಸಂಭವಿಸಿದೆ.

ಘಟನೆಯಲ್ಲಿ, ಇಬ್ಬರು ಯುವತಿಯರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಉಪ್ಪಳ ಹಿದಾಯತ್ ನಗರ ನಿವಾಸಿ ಬಷಾರ ಅಹಮ್ಮದ್ (22) ಮೃತ ದುರ್ದೈವಿ. ಇನ್ನೋರ್ವ ಗಾಯಾಳು ಗುರುತು ಪತ್ತೆಯಾಗಿಲ್ಲ. ಕೇರಳ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ. ನಾಲ್ವರಿದ್ದ ಕಾರು ಕೊಲ್ಯ- ಅಡ್ಕ ಬಳಿ ರಸ್ತೆ ವಿಭಜಕವನ್ನು ಏರಿ, ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಗಂಭೀರ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಾಳು ಪೈಕಿ ಫಾತಿಮಾ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿಯಾಗಿದ್ದಾರೆ. ನಾಲ್ವರು ಗೆಳೆಯರಾಗಿದ್ದರೆಂದು ತಿಳಿದುಬಂದಿದೆ. ಅಪಘಾತ ನಡೆದ ಸ್ಥಳಕ್ಕೆ ಸಂಚಾರಿ ಹಾಗೂ ಉಳ್ಳಾಲ ಠಾಣಾ ಪೊಲೀಸರು ತಡವಾಗಿ ಆಗಮಿಸಿದ್ದರು ಎಂದು ಆರೋಪಿಸಿ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

- Advertisement -

Latest News

error: Content is protected !!