Monday, June 8, 2026
Homeಕರಾವಳಿಬಂಟ್ವಾಳ; ನೇರಳಕಟ್ಟೆಯಲ್ಲಿ ಮರದ ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಕುಶಲ ಕರ್ಮಿ ಸಾವು

ಬಂಟ್ವಾಳ; ನೇರಳಕಟ್ಟೆಯಲ್ಲಿ ಮರದ ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಕುಶಲ ಕರ್ಮಿ ಸಾವು

- Advertisement -
- Advertisement -

ಬಂಟ್ವಾಳ:  ಮರದ ಕೆಲಸದಲ್ಲಿ ನಿರತರಾಗಿದ್ದಾಗಲೇ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ.ಪುಂಜಾಲಕಟ್ಟೆ ನಿವಾಸಿ ಪುರುಷೋತ್ತಮ ಆಚಾರ್ಯ ಮೃತ ದುರ್ದೈವಿ.

ನೇರಳಕಟ್ಟೆಯಲ್ಲಿ ಪೀಠೋಪಕರಣ ತಯಾರಿ ಅಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪುರುಷೋತ್ತಮ ಅವರು ಅಲ್ಲಿ ಕೆಲಸ ಮಾಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನು ಪುರುಷೋತ್ತಮ ಅವರು ಮೃತರು ಪತ್ನಿ, ಅಂಗನವಾಡಿ ಕಾರ್ಯಕರ್ತೆ ಗೀತಾ ಕೆ.ಆಚಾರ್ಯ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!