Saturday, June 6, 2026
Homeಕರಾವಳಿಪುತ್ತೂರು; ಕಳ್ಳತನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

ಪುತ್ತೂರು; ಕಳ್ಳತನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

- Advertisement -
- Advertisement -

ಪುತ್ತೂರು: ಕಳ್ಳತನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಕಬಕ ವಿದ್ಯಾಪುರ ನಿವಾಸಿ ಸಂಶೀರ್‌ ಬಂಧಿತ ಆರೋಪಿ. ವಿಚಾರಣೆಗೆ ಹಾಜರಾಗದೇ ಇದ್ದ ಆರೋಪಿಯ ಬಂಧನಕ್ಕೆ ನ್ಯಾಯಾಲಯ ವಾರಂಟ್‌ ಜಾರಿ ಮಾಡಿತ್ತು. ಅದರಂತೆ ಫೆ.4 ರಂದು ಆರೋಪಿಯು ಬೆಂಗಳೂರಿನಿಂದ ಕಬಕಕ್ಕೆ ಬಂದಿದ್ದ ಮಾಹಿತಿ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!