Friday, June 5, 2026
Homeಕರಾವಳಿಬೆಳ್ತಂಗಡಿ; ತೆಂಗಿನಕಾಯಿ ತೆಗೆಯುವಾಗ ತಲೆ ಮೇಲೆ ತೆಂಗಿನಕಾಯಿ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ; ತೆಂಗಿನಕಾಯಿ ತೆಗೆಯುವಾಗ ತಲೆ ಮೇಲೆ ತೆಂಗಿನಕಾಯಿ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ : ತೆಂಗಿನಕಾಯಿ ತೆಗೆಯುವಾಗ ತಲೆ ಮೇಲೆ ತೆಂಗಿನಕಾಯಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕರಂಬಾರು ಕಾಪಿನಡ್ಕದಲ್ಲಿ ನಡೆದಿದೆ. ಕರಂಬಾರು ಗ್ರಾಮದ ಕೆಳ್ಕರ ಕಾಪಿನಡ್ಕ ನಿವಾಸಿ, ಪ್ರಗತಿಪರ ಕೃಷಿಕ ಸತೀಶ್‌ ರಾವ್‌ (58) ಮೃತ ದುರ್ದೈವಿ.

ತೆಂಗಿನಕಾಯಿ ಬಿದ್ದು ಸತೀಶ್ ಅವರ ತಲೆ ಹಾಗೂ ಕುತ್ತಿಗೆಗೆ ಗಂಭೀರವಾಗಿ ಗಾಯವಾಗಿತ್ತು.  ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.

ಸತೀಶ್‌ ರಾವ್‌ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಸಹಿತ ಶ್ರೀ ಕೆಳ್ಕರ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಕೆ. ರಾಮಚಂದ್ರ ರಾವ್‌ ಅವರನ್ನು ಅಗಲಿದ್ದಾರೆ.

- Advertisement -

Latest News

error: Content is protected !!