- Advertisement -
- Advertisement -
ಕೇರಳ : ಮನುಷ್ಯರು ಹೀಗೂ ಇರ್ತಾರಾ ಅನ್ನೋ ವಿಚಿತ್ರ ಹಾಗೂ ಬೆಚ್ಚಿ ಬೀಳಿಸುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಕೊಲ್ಲಂ ಜಿಲ್ಲೆಯ ಪುತ್ತೂರಿನ ಮಾರನಾಡು ನಿವಾಸಿ ವಿಜಯಕುಮಾರ್ ಎಂಬ ವೃದ್ಧ ಡೆತ್ ನೋಟ್ ಬರೆದಿಟ್ಟು ತನ್ನ ಚಿತೆಯನ್ನು ತಾನೆ ಸಿಂಗರಿಸಿ, ಅದಕ್ಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ಅನಾರೋಗ್ಯದಿಂದ ಬಳಲುತ್ತಿದ್ದು, ಕೆಲ ದಿನಗಳಿಂದ ಕೆಲಸಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ.ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೃತ ವ್ಯಕ್ತಿ ತನ್ನ ಸ್ನೇಹಿತನನ್ನು ಉದ್ದೇಶಿಸಿ ಡೆತ್ ನೋಟ್ ಬರೆದಿದ್ದು ಅದರಲ್ಲಿ ತನ್ನ ಆರೋಗ್ಯದ ಸ್ಥಿತಿಯಿಂದ ಇನ್ನು ಮುಂದೆ ಕೆಲಸ ಮಾಡಲು ಸಾಧ್ಯವಾಗದ ಕಾರಣ ತನ್ನ ಜೀವನವನ್ನು ಕೊನೆಗೊಳಿಸುತ್ತಿರುವುದಾಗಿ ಹೇಳಿದ್ದಾರೆ..
- Advertisement -