Thursday, June 4, 2026
Homeಕರಾವಳಿವಿಟ್ಲ; ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳಾ ಆರೋಪಿಯ ಬಂಧನ

ವಿಟ್ಲ; ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳಾ ಆರೋಪಿಯ ಬಂಧನ

- Advertisement -
- Advertisement -

ವಿಟ್ಲ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳಾ ಆರೋಪಿಯನ್ನು ವಿಟ್ಲ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.‌ಕೇರಳ ರಾಜ್ಯದ ಪಯ್ಯನ್ನೂರು ಜಿಲ್ಲೆಯ ಕುಂಞಮಂಗಲ ಪಾಣಚೇರಿ ನಿವಾಸಿ ಸುಜಾತ(42) ಬಂಧಿತ ಆರೋಪಿ.

ಈಕೆಯ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ 2013ರಲ್ಲಿ ಪ್ರಕರಣ ದಾಖಲಾಗಿತ್ತು.ಆದರೆ ಈಕೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದು, ಈ ಬಗ್ಗೆ LOCಯನ್ನು ತೆರೆಯಲಾಗಿತ್ತು. ಆರೋಪಿ ನಿನ್ನೆ ವಿದೇಶದಿಂದ ರಾತ್ರಿ 2-30 ಗಂಟೆಗೆ ಕೇರಳ ರಾಜ್ಯದ ಕೋಝಿಕೊಡ್ ಅಂತರಾಷ್ಟೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಇಮಿಗ್ರೇಷನ್ ಅಧಿಕಾರಿಗಳು ಆಕೆಯನ್ನು ಬಂಧಿಸಿ ಪೊಲೀಸರಿಗೆ ನೀಡಿದ ಮಾಹಿತಿಯಂತೆ ವಿಟ್ಲ ಪೊಲೀಸ್ ಠಾಣಾ ಎ.ಎಸ್.ಐ. ಜಯರಾಮ ಮತ್ತು ಮಹಿಳಾ ಸಿಬ್ಬಂದಿ ಸಂಗೀತ ಎಂಬವರು ಕೇರಳ ರಾಜ್ಯಕ್ಕೆ ತೆರಳಿ ಆರೋಪಿತೆ ಸುಜಾತಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Latest News

error: Content is protected !!