Thursday, June 4, 2026
Homeಚಿಕ್ಕಮಗಳೂರುಚಿಕ್ಕಮಗಳೂರು : ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು, ವನ್ಯ ಸಂಪತ್ತು ಬೆಂಕಿಗಾಹುತಿ

ಚಿಕ್ಕಮಗಳೂರು : ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು, ವನ್ಯ ಸಂಪತ್ತು ಬೆಂಕಿಗಾಹುತಿ

- Advertisement -
- Advertisement -

ಚಿಕ್ಕಮಗಳೂರು : ಇಲ್ಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ವನ್ಯ ಸಂಪತ್ತು ಬೆಂಕಿಗಾಹುತಿಯಾಗಿದೆ.

ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ. ಚಿಕ್ಕಮಗಳೂರು ತಾಲೂಕಿನ ಪವಿತ್ರವನ ಸಮೀಪದ ಚುರ್ಚೆಗುಡ್ಡ ಮೀಸಲು ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಡೀ ರಾತ್ರಿ ಅರಣ್ಯ ಪ್ರದೇಶ ಹೊತ್ತಿ ಉರಿದಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇನ್ನು ಪ್ರಾಣಿ-ಪಕ್ಷಿಗಳು ಬೆಂಕಿಯಲ್ಲಿ ಬೆಂದು ಕರಕಲಾಗಿವೆ. ಕಾಡ್ಗಿಚ್ಚಿಗೆ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!