Saturday, June 6, 2026
Homeಕರಾವಳಿಮಂಗಳೂರು: ಅಪರಿಚಿತ ವಾಹನ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು

ಮಂಗಳೂರು: ಅಪರಿಚಿತ ವಾಹನ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಮಂಗಳೂರು: ನಿನ್ನೆ ರಾತ್ರಿ ರಾ.ಹೆ.75 ರ ಅಡ್ಯಾರ್‌ ಕಟ್ಟೆಯ ಬಳಿ ನಡೆದ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಸಮೀಪದ ಮಾಣಿಲ ಗ್ರಾಮದ ಪಕಳಕುಂಜ ಬಾಳೆಕಾನ ನಿವಾಸಿ ಗೋಪಾಲಕೃಷ್ಣ ಮಣಿಯಾಣಿರವರ ಪುತ್ರ ಕಾರ್ತಿಕ್ ಮಣಿಯಾನಿ (24) ಮೃತಪಟ್ಟ ಬೈಕ್‌ ಸವಾರ.

ಮಂಗಳೂರಿನಲ್ಲಿ ಡೆಕೋರೇಷನ್ ಕೆಲಸ ಮಾಡ್ತಿದ್ದ ಕಾರ್ತಿಕ್‌ ರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಾಸ್ಸಾಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

- Advertisement -

Latest News

error: Content is protected !!