Saturday, August 29, 2026
Homeಕರಾವಳಿಪುತ್ತೂರು ರೈಲ್ವೇ ನಿಲ್ದಾಣದ ಬಳಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ ನ ಎಪಿಎಂಸಿ ರೈಲ್ವೇ ಗೇಟ್‌ ಸಮೀಪದ ಪೊದೆಯಲ್ಲಿ ಶವ ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದ್ದರಿಂದ ಗುರುತು ಪತ್ತೆಯಾಗಿಲ್ಲ.

ಮಹಿಳೆಯ ಕಾಲಿನಲ್ಲಿ ಗೆಜ್ಜೆ, ಸೀರೆ ಮೇಲ್ನೊಟಕ್ಕೆ ಕಾಣಿಸುತ್ತಿದ್ದು ಸುಮಾರು 35 ರಿಂದ 40 ವರ್ಷದ ಮಹಿಳೆ ಆಗಿರಬಹುದೆಂದು ಅಂದಾಜಿಸಲಾಗಿದೆ.

 ಎರಡು ಮೂರು ದಿನದ ಹಿಂದೆಯೇ ಮಹಿಳೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಮತ್ತು ರೈಲ್ವೇ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!