Sunday, June 7, 2026
Homeಕರಾವಳಿಉಡುಪಿಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಸ್ಪರ್ಧಿಸಲು ಬಿಜೆಪಿ ಸಚಿವರೇ ಸಹಕಾರ ನೀಡುತ್ತಿದ್ದಾರೆ; ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್...

ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಸ್ಪರ್ಧಿಸಲು ಬಿಜೆಪಿ ಸಚಿವರೇ ಸಹಕಾರ ನೀಡುತ್ತಿದ್ದಾರೆ; ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಾಕಿಂಗ್ ಹೇಳಿಕೆ

- Advertisement -
- Advertisement -

ಮಂಗಳೂರು: ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಸ್ಪರ್ಧಿಸಲು ಬಿಜೆಪಿ ಸಚಿವರೇ ಸಹಕಾರ ನೀಡುತ್ತಿದ್ದಾರೆ ಎಂದು ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಕಾರ್ಕಳದಲ್ಲಿ ಸ್ಪರ್ಧಿಸಲು ನನಗೆ ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಮುತಾಲಿಕ್ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುನೀಲ್ ಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲ್ಪಡುತ್ತಿದ್ದು, ಮುಖ್ಯಮಂತ್ರಿ ರೇಸ್ ನಲ್ಲಿರುವ ಇತರ ಕೆಲವು ಬಿಜೆಪಿ ಮುಖಂಡರು ನನಗೆ ಸಹಕಾರದ ಭರವಸೆ ನೀಡಿದ್ದಾರೆ.

ಕಾರ್ಕಳದಲ್ಲಿ ನನ್ನ ಗೆಲುವು ಖಚಿತ. ನಕಲಿ ಹಿಂದುತ್ವ ಮತ್ತು ಭ್ರಷ್ಟಾಚಾರದ ವಿರುದ್ದ ನನ್ನ ಸ್ಪರ್ಧೆ ಎಂದಿದ್ದಾರೆ.

- Advertisement -

Latest News

error: Content is protected !!