Thursday, June 4, 2026
Homeಕೊಡಗುಕೊಡಗಿನಲ್ಲಿ ಇಬ್ಬರನ್ನು ಬಲಿ ಪಡೆದ ನರಭಕ್ಷಕ ಹುಲಿ ಕೊನೆಗೂ ಸೆರೆ

ಕೊಡಗಿನಲ್ಲಿ ಇಬ್ಬರನ್ನು ಬಲಿ ಪಡೆದ ನರಭಕ್ಷಕ ಹುಲಿ ಕೊನೆಗೂ ಸೆರೆ

- Advertisement -
- Advertisement -

ಕೊಡಗಿನಲ್ಲಿ‌ ಇಬ್ಬರನ್ನು ಬಲಿ ಪಡೆದ ನರಭಕ್ಷಕ ಹುಲಿಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ನಾಣಚ್ಚಿಗೇಟ್ ಬಳಿ ಅರವಳಿಕೆ ಚುಚ್ಚುಮದ್ದು ನೀಡಿ ನರಭಕ್ಷಕ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ ಇಂದು ಸಾಕಾನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಿಡಿದಿದ್ದಾರೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಗರಹೊಳೆ ಗಡಿಯಲ್ಲಿರುವ ಕೆ.ಬಾಡಗ ಗ್ರಾಮದಲ್ಲಿ ಹುಲಿ ದಾಳಿಗೆ ಇಬ್ಬರು ಬಲಿಯಾದ ಪ್ರಕರಣ ಸಂಬಂಧಿಸಿದಂತೆ ಹುಲ್ಲಿ ಕೊಲ್ಲುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.

- Advertisement -

Latest News

error: Content is protected !!