Wednesday, June 3, 2026
Homeತಾಜಾ ಸುದ್ದಿಟಿಪ್ಪು ಸುಲ್ತಾನ್‌ ಮಾದರಿಯಲ್ಲೇ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು; ವಿವಾದಾತ್ಮಕ ಹೇಳಿಕೆ ನೀಡಿದ ಉನ್ನತ ಶಿಕ್ಷಣ...

ಟಿಪ್ಪು ಸುಲ್ತಾನ್‌ ಮಾದರಿಯಲ್ಲೇ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು; ವಿವಾದಾತ್ಮಕ ಹೇಳಿಕೆ ನೀಡಿದ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್

- Advertisement -
- Advertisement -

ಮಂಡ್ಯ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ಮಧ್ಯೆ ವಾಕ್ಸಮರ ಹೊಸದಲ್ಲ. ಆದರೆ ಏನು ಮಾತನಾಡುತ್ತಿದ್ದೇವೆ ಎಂಬ ಪರಿಜ್ಞಾನ ಇಲ್ಲದೇ ಮಾತನಾಡಿದರೆ ವಿವಾದ ಕಟ್ಟಿಟ್ಟ ಬುತ್ತಿ. ಇದೀಗ ಅದೇ ರೀತಿ ವಿವಾದಕ್ಕೆ ಗುರಿಯಾಗಿದ್ದಾರೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್.

ಮಂಡ್ಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಅಶ್ವತ್ಥ್ ನಾರಾಯಣ್ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್‌ ಮಾದರಿಯಲ್ಲೇ ಹೊಡೆದು ಹಾಕಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 ಮಂಡ್ಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರ ಬಳಿ ನಿಮಗೆ ಸಾವರ್ಕರ್‌ ಬೇಕಾ? ಟಿಪ್ಪು ಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಸಾರ್ವಕರ್ ಎಂದು ಕಾರ್ಯಕರ್ತರು ಹೇಳಿದ್ದಾರೆ. ಆಗ ಅಶ್ವತ್ಥ್ ನಾರಾಯಣ್ ಈ ರೀತಿ ಹೇಳಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!