Saturday, June 13, 2026
Homeಕರಾವಳಿಉಡುಪಿಉಡುಪಿ; ಆತ್ಮಹತ್ಯೆ ಹತ್ಯೆಗೆ ಯತ್ನಿಸುವಾಗ ಸೀರೆ ತುಂಡಾಗಿ ಕಟ್ಟಡದಿಂದ ಬಿದ್ದು ವೃದ್ಧೆ ಸಾವು

ಉಡುಪಿ; ಆತ್ಮಹತ್ಯೆ ಹತ್ಯೆಗೆ ಯತ್ನಿಸುವಾಗ ಸೀರೆ ತುಂಡಾಗಿ ಕಟ್ಟಡದಿಂದ ಬಿದ್ದು ವೃದ್ಧೆ ಸಾವು

- Advertisement -
- Advertisement -

ಉಡುಪಿ: ಆತ್ಮಹತ್ಯೆ ಹತ್ಯೆಗೆ ಯತ್ನಿಸುವಾಗ ಸೀರೆ ತುಂಡಾಗಿ ಕಟ್ಟಡದಿಂದ ಬಿದ್ದು ವೃದ್ಧೆ ಸಾವನ್ನಪ್ಪಿರುವ ಘಟನೆ ಮಣಿಪಾಲದ ವಸತಿ ಸಮುಚ್ಛಯದಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆಯ ಗೌರಿ (70) ದುರ್ದೈವಿ.

ಇವರು ಫ್ಲ್ಯಾಟ್‌ನಲ್ಲಿ ಮನೆ ಕೆಲಸ ಮಾಡಿಕೊಂಡಿದ್ದರು. ಇವರ ನಾಲ್ಕು ಮಕ್ಕಳಲ್ಲಿ ಇಬ್ಬರು ಮಕ್ಕಳು ಮತ್ತು ಪತಿ ಮೃತಪಟ್ಟಿದ್ದಾರೆ. ತನಗೆ ಸ್ವಂತ ಮನೆ ಇಲ್ಲದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡ ಇವರು ಟೇರಸ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಈ ವೇಳೆ ಸೀರೆ ತುಂಡಾಗಿ ಮಹಿಳೆ ಕಟ್ಟಡದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!