Sunday, June 7, 2026
Homeಚಿಕ್ಕಮಗಳೂರುಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ರಾಜ್ಯಪಾಲರು

ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ರಾಜ್ಯಪಾಲರು

- Advertisement -
- Advertisement -

ಶೃಂಗೇರಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಪತ್ನಿ ಅನಿತಾ ಗೆಹ್ಲೋಟ್ ಹಾಗೂ ಮೊಮ್ಮಕ್ಕಳೊಂದಿಗೆ ಶೃಂಗೇರಿ ಕ್ಷೇತ್ರಕ್ಕೆ ಭೇಟಿ ನೀಡಿ ಶಾರದಾಂಬೆ ಹಾಗೂ ವಿದ್ಯಾಶಂಕರ ಸ್ವಾಮಿ ದರ್ಶನ ಪಡೆದರು.

ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ರಾಜ್ಯಪಾಲರಿಗೆ ಸ್ವಾಗತ ಕೋರಲಾಯಿತು. ಶೃಂಗೇರಿ ಶಾರದ ಪೀಠದ ಕಿರಿಯ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ರಾಜ್ಯಪಾಲರು ಗುರುಗಳ ಆಶೀರ್ವಾದ ಪಡೆದರು.

ಶಾರಾದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ­­­­ರಾಜ್ಯಪಾಲರಿಗೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್, ಎಸ್ ಪಿ ಉಮಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!