Thursday, June 4, 2026
Homeತಾಜಾ ಸುದ್ದಿಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ

ಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ

- Advertisement -
- Advertisement -

ಬೆಂಗಳೂರು: ತೀವ್ರ ಹೃದಯಾಘಾತಕ್ಕೆ ಒಳಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ(39) ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಕುಂಪಂನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್​ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದರು. ಇತ್ತ ತಾರಕರತ್ನ ಶೀಘ್ರ ಗುಣಮುಖರಾಗಿ ವಾಪಸ್‌ ಬರಲಿ ಎಂದು ತೆಲುಗು ದೇಶಂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ನಂದಮೂರಿ ಕುಟುಂಬಸ್ಥರು ಹಾರೈಸಿದ್ದರು. ಆಸ್ಪತ್ರೆಗೆ ಆಂಧ್ರ ಪ್ರದೇಶ ಸಚಿವರು, ಮಾಜಿ ಸಚಿವರು ಸೇರಿದಂತೆ ಹಲವು ರಾಜಕೀಯ ಗಣ್ಯರು ಆಸ್ಪತ್ರೆಗ ಭೇಟಿ ನೀಡಿ ತಾರಕರತ್ನ ಅವರ ಆರೋಗ್ಯದ ಬಗ್ಗೆ ವೈದ್ಯರ ಜೊತೆ ಚರ್ಚಿಸಿದ್ದರು. ಆದ್ರೆ, ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ.ನಿನ್ನೆ ಎಲ್ಲರನ್ನು ಬಿಟ್ಟು ತಾರಕ ರತ್ನ ಇಹಲೋಕ ಪಯಣಿಸಿದ್ದಾರೆ.

- Advertisement -

Latest News

error: Content is protected !!