Thursday, June 4, 2026
Homeಕರಾವಳಿಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅಧಿಕಾರ ಸ್ವೀಕಾರ

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅಧಿಕಾರ ಸ್ವೀಕಾರ

- Advertisement -
- Advertisement -

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಕುಲದೀಪ್ ಕುಮಾರ್ ಜೈನ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅಧಿಕಾರ ಹಸ್ತಾಂತರಿಸಿದರು.

ಶಶಿಕುಮಾರ್ ಅವರನ್ನು ನಿನ್ನೆಯಷ್ಟೇ ರೈಲ್ವೇ ಡಿಐಜಿ ಆಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು.

2011ನೇ ಬ್ಯಾಚ್ ನ ಐಪಿಎಸ್ ಅಧಿಕಾರಿ ಆಗಿರುವ ಕುಲದೀಪ್ ಕುಮಾರ್ ಜೈನ್, ಮೂಲತಃ ರಾಜಸ್ಥಾನದವರಾಗಿದ್ದು ತಮಿಳುನಾಡಿನಲ್ಲಿ ಶಿಕ್ಷಣ ಪಡೆದಿದ್ದಾರೆ.

ಐಪಿಎಸ್ ತರಬೇತಿ ಬಳಿಕ ಕುಲದೀಪ್ ಕುಮಾರ್ ಜೈನ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

- Advertisement -

Latest News

error: Content is protected !!