Thursday, June 4, 2026
Homeತಾಜಾ ಸುದ್ದಿಆಂಧ್ರಪ್ರದೇಶ ರಾಜ್ಯಪಾಲರಾಗಿ ಮೂಡಬಿದರೆಯ ನ್ಯಾ. ಅಬ್ದುಲ್ ನಜೀರ್ ಪ್ರಮಾಣ ವಚನ ಸ್ವೀಕಾರ

ಆಂಧ್ರಪ್ರದೇಶ ರಾಜ್ಯಪಾಲರಾಗಿ ಮೂಡಬಿದರೆಯ ನ್ಯಾ. ಅಬ್ದುಲ್ ನಜೀರ್ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ವಿಜಯವಾಡ: ಆಂಧ್ರಪ್ರದೇಶದ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ವಿಜಯವಾಡದ ರಾಜ ಭವನದಲ್ಲಿ ನಡೆದ ಸಮಾರಂಭದಲ್ಲಿ ಕನ್ನಡಿಗ ಅಬ್ದುಲ್ ನಜೀರ್ ಅವರು ಆಂಧ್ರ ಪ್ರದೇಶ ರಾಜ್ಯದ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಆಂಧ್ರ ಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಬ್ದುಲ್ ನಜೀರ್ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸಮಾರಂಭದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ಇತರೆ ಗಣ್ಯರು ಉಪಸ್ಥಿತರಿದ್ದರು.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯವರಾದ ನ್ಯಾ. ಅಬ್ದುಲ್ ನಜೀರ್ ಅವರನ್ನು ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯಪಾಲರಾಗಿ ನೇಮಿಸಿ ಆದೇಶ ಹೊರಡಿಸಿತ್ತು.

- Advertisement -

Latest News

error: Content is protected !!