Monday, May 13, 2024
Homeತಾಜಾ ಸುದ್ದಿಇಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಚಾಲನೆ;ಏರ್ ಪೋರ್ಟ್ ನಲ್ಲಿ ಪ್ರಧಾನಿ ವಿಮಾನ...

ಇಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಚಾಲನೆ;ಏರ್ ಪೋರ್ಟ್ ನಲ್ಲಿ ಪ್ರಧಾನಿ ವಿಮಾನ ಲ್ಯಾಂಡಿಂಗ್ ಮೂಲಕವೇ ಉದ್ಘಾಟನೆ!

spot_img
- Advertisement -
- Advertisement -

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ನಾಳೆ ದೆಹಲಿಯಿಂದ ನೇರವಾಗಿ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ಬಂದಿಳಿಯಲಿರುವ ಪ್ರಧಾನಿ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ ಏರ್ ಪೋರ್ಟ್ ಆವರಣದಲ್ಲೇ ಆಯೋಜಿಸಲಾಗಿರುವ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ, ಎರಡು ರೈಲ್ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

990 ಕೋಟಿ ರೂಪಾಯಿ ವೆಚ್ಚದ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೇ ಮಾರ್ಗ ಮತ್ತು100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕೋಟೆಗಂಗೂರು ರೈಲ್ವೇ ಕೋಚಿಂಗ್ ಡಿಪೋಗೆ ಶಂಕುಸ್ಥಾಪನೆ ನಡೆಯಲಿದೆ. ನಂತರ 215 ಕೋಟಿ ರೂಪಾಯಿ ವೆಚ್ಚದ ಬಹುರಸ್ತೆ ಅಭಿವೃದ್ಧಿ ಕಾಮಗಾರಿಗೆ ನರೇಂದ್ರ ಮೋದಿ ಶಿಲಾನ್ಯಾಸ ಮಾಡಲಿದ್ದು, ರಾಷ್ಟ್ರೀಯ ಹೆದ್ದಾರಿ 766ಸಿ ನಲ್ಲಿ ಶಿಕಾರಿಪುರ ನಗರಕ್ಕೆ ಹೊಸ ಬೈಪಾಸ್ ರಸ್ತೆ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ 169ಎ ನಲ್ಲಿ ಮೇಗರವಳ್ಳಿಯಿಂದ ಆಗುಂಬೆವರೆಗೂ ರಸ್ತೆ ಅಗಲೀಕರಣ ಕಾಮಗಾರಿ ಮತ್ತು ರಾಷ್ಟ್ರೀಯ 169ರಲ್ಲಿ‌ ತೀರ್ಥಹಳ್ಳಿ ತಾಲ್ಲೂಕಿನ ಭಾರತಿಪುರದಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಇದರಲ್ಲಿ ಒಳಗೊಂಡಿದೆ. ಇದಾದ ಬಳಿಕ ಜಲ ಜೀವನ್ ಮಿಷನ್ ಅಡಿಯಲ್ಲಿ 950 ಕೋಟಿ ರೂಪಾಯಿ ವೆಚ್ಚದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನಡೆಯಲಿದ್ದು, ಗೌತಮಪುರ ಮತ್ತು 127 ಗ್ರಾಮಗಳಿಗೆ ಕುಡಿಯುವ ನೀರು ಯೋಜನೆ ಉದ್ಘಾಟನೆ ಹಾಗೂ 860 ಕೋಟಿ ರೂಪಾಯಿ ವೆಚ್ಚದ ಬಹುಗ್ರಾಮ ಕುಡಿಯುವ ನೀರು ಯೋಜನೆಗಳಿಗೆ ಶಂಕುಸ್ಥಾಪನೆ ಕೂಡಾ ನಡೆಯಲಿದೆ. ಇದೇ ವೇಳೆ ಶಿವಮೊಗ್ಗ ನಗರದಲ್ಲಿ 895 ಕೋಟಿ ರೂಪಾಯಿ ವೆಚ್ಚದಲ್ಲಿನ 44 ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ಗಳ ಉದ್ಘಾಟನೆಯನ್ನು ಕೂಡಾ ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ

- Advertisement -
spot_img

Latest News

error: Content is protected !!