Saturday, June 6, 2026
Homeತಾಜಾ ಸುದ್ದಿಬಿಜೆಪಿ ಸೇರ್ತಾರಾ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್?

ಬಿಜೆಪಿ ಸೇರ್ತಾರಾ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್?

- Advertisement -
- Advertisement -

ಬೆಂಗಳೂರು : ಮಾಜಿ ಐಪಿಎಸ್ ಅಧಿಕಾರಿ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಬಿಜೆಪಿ ಸೇರ್ತಾರಾ ಅನ್ನೋ ಅನುಮಾನ ಇದೀಗ ದಟ್ಟವಾಗಿದೆ. ಹೀಗೊಂದು ಅನುಮಾನ ಮೂಡೋದಕ್ಕೆ ಕಾರಣ ಅವರು  ಬಿಜೆಪಿ ನಾಯಕರನ್ನು ಭೇಟಿ ಮಾಡಿರೋದು.

ಯೆಸ್..ಭಾಸ್ಕರ್ ರಾವ್ ಅವರು ಇಂದು ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಭೇಟಿ ಮಾಡಿದ್ದಾರೆ. ದ್ಮನಾಭನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಇದರ ಜೊತೆಗೆ ಬಿಜೆಪಿ ರಾಜ್ಯ ಕಚೇರಿಗೆ ಕೂಡ ಭೇಟಿ ನೀಡಿ ಅಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ.ಇದರಿಂದ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಪಿಸುಪಿಸು ಕೇಳಿ ಬರುತ್ತಿದೆ.

ಆಮ್ ಆದ್ಮಿ ಪಕ್ಷದಲ್ಲಿ ಭಾಸ್ಕರ್ ರಾವ್ ಸಕ್ರಿಯರಾಗಿದ್ದು, ಬಿಜೆಪಿಯತ್ತ ವಾಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ. ಇತ್ತೀಚೆಗೆ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ರಾಜೀನಾಮೆಯನ್ನ ರಾಜ್ಯ ಸರ್ಕಾರ ಅಂಗೀಕರಿಸಿ ಅವರನ್ನು ಅಧಿಕೃತವಾಗಿ ಸೇವೆಯಿಂದ ಬಿಡುಗಡೆಗೊಳಿಸಿತ್ತು.

- Advertisement -

Latest News

error: Content is protected !!