Thursday, June 4, 2026
Homeಮನರಂಜನೆಬಾಲಿವುಡ್ ನಟಿ ಸುಶ್ಮಿತಾ ಸೇನ್ ಗೆ ಹೃದಯಾಘಾತ; ಬದುಕಿನ ಕಹಿ ಘಟನೆಯ ಬಗ್ಗೆ ಬಾಯ್ಬಿಟ್ಟ ಮಾಜಿ...

ಬಾಲಿವುಡ್ ನಟಿ ಸುಶ್ಮಿತಾ ಸೇನ್ ಗೆ ಹೃದಯಾಘಾತ; ಬದುಕಿನ ಕಹಿ ಘಟನೆಯ ಬಗ್ಗೆ ಬಾಯ್ಬಿಟ್ಟ ಮಾಜಿ ಭುವನ ಸುಂದರಿ

- Advertisement -
- Advertisement -

ಮುಂಬೈ; ಮಾಜಿ ಭುವನ ಸುಂದರಿ ಬಾಲಿವುಡ್ ನಟಿ ಸುಶ್ಮಿತಾ ಸೇನ್ ತಮ್ಮ ಬದುಕಿನ ಅತ್ಯಂತ ಕರಾಳ ಘಟನೆಯೊಂದರ ಬಗ್ಗೆ ಮೌನ ಮುರಿದಿದ್ದಾರೆ. ತಮಗೆ ಹೃದಯಾಘಾತವಾದ ವಿಚಾರವನ್ನು ಸುಶ್ಮಿತಾ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸುಶ್ಮಿತಾ ಸೇನ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಸ್ಟಂಟ್ ಆಳವಡಿಸಿ ಚಿಕಿತ್ಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.


ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಂ ಪೇಜ್ ನಲ್ಲಿ ಪೋಸ್ಟ್ ಮಾಡಿರುವ ಸುಶ್ಮೀತಾ ಸೇನ್ ‘ನಿಮ್ಮ ಹೃದಯವನ್ನ ಸದಾ ಸಂತೋಷದಿಂದ ಹಾಗೂ ಧೈರ್ಯದಿಂದ ಇಟ್ಟುಕೊಳ್ಳಿ. ನಿಮಗೆ ಅಗತ್ಯವಿರುವಾಗ ಅದು ನಿಮ್ಮೊಂದಿಗೆ ನಿಲ್ಲುತ್ತದೆ – ಇದು ನನ್ನ ತಂದೆಯ ಬುದ್ಧಿವಂತ ಮಾತುಗಳು. ಒಂದೆರಡು ದಿನಗಳ ಹಿಂದೆಯಷ್ಟೇ ನನಗೆ ಹೃದಯಾಘಾತ ಸಂಭವಿಸಿತು. ನನಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಸ್ಟೆಂಟ್ ಅಳವಡಿಸಲಾಗಿದೆ. ಮುಖ್ಯವಾಗಿ, ನನ್ನ ಹೃದ್ರೋಗ ತಜ್ಞ ‘’ನನಗೆ ದೊಡ್ಡ ಹೃದಯವಿದೆ’’ ಎಂದು ದೃಢಪಡಿಸಿದ್ದಾರೆ. ನನ್ನ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ಮತ್ತೆ ಜೀವನ ಸಾಗಿಸಲು ನಾನು ಸಿದ್ಧಳಾಗಿದ್ದೇನೆ. ನನ್ನ ಪ್ರೀತಿ ಪಾತ್ರರಿಗೆ ಈ ಗುಡ್ ನ್ಯೂಸ್‌ ತಿಳಿಸುವ ಸಲುವಾಗಿ ಈ ಪೋಸ್ಟ್ ಹಂಚಿಕೊಳ್ಳುತ್ತಿದ್ದೇನೆ. ನಿಮ್ಮೆಲ್ಲರನ್ನು ನಾನು ಪ್ರೀತಿಸುತ್ತೇನೆ’’ ಎಂದು  ಬರೆದುಕೊಂಡಿದ್ದಾರೆ.


ಸುಶ್ಮಿತಾ ಅವರೇ ಹೇಳಿಕೊಂಡಂತೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದಿದ್ದಾರೆ. ಆರೋಗ್ಯದ ಬಗ್ಗೆ ಆತಂಕ ಪಡಬೇಕಿಲ್ಲ ಎಂದು ಅಭಿಮಾನಿಗಳಿಗೂ ಎಂದು ಅವರು ಹೇಳಿದ್ದಾರೆ. 

- Advertisement -

Latest News

error: Content is protected !!