Monday, June 8, 2026
Homeಕರಾವಳಿ48 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಬಿಸಿಗಾಳಿ ಬೀಸುವ ಸಾಧ್ಯತೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

48 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಬಿಸಿಗಾಳಿ ಬೀಸುವ ಸಾಧ್ಯತೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

- Advertisement -
- Advertisement -

ಮಂಗಳೂರು: ಈಗಾಗಲೇ ಬಿಸಿಲಿನಿಂದ ಬಳಲಿ ಬೆಂಡಾಗಿ ಹೋಗಿರುವ ಕರಾವಳಿಗರಿಗೆ ಭಾರತೀಯ ಹವಾಮಾನ ಇಲಾಖೆ ಇದೀಗ ಮತ್ತೊಂದು ಶಾಕ್ ನೀಡಿದೆ.

ದಕ್ಷಿಣಕನ್ನಡ ಉಡುಪಿ ಸಹಿತ ಕರಾವಳಿ ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಅಲ್ಲದೆ ಈ ಅವಧಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರುವ ಸಾಧ್ಯತೆಗಳಿದ್ದು, ಜನರ ಆರೋಗ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿಶೇಷ ನಿಗಾ ವಹಿಸಲು ಸೂಚನೆ ನೀಡಲಾಗಿದೆ.

.

- Advertisement -

Latest News

error: Content is protected !!