Thursday, June 4, 2026
Homeಕರಾವಳಿಬೆಳ್ತಂಗಡಿ : ನಿಡಿಗಲ್ ನಲ್ಲಿ ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ಮಧ್ಯೆ ಅಪಘಾತ; ಮುಂಡಾಜೆ ಹಾಲು...

ಬೆಳ್ತಂಗಡಿ : ನಿಡಿಗಲ್ ನಲ್ಲಿ ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ಮಧ್ಯೆ ಅಪಘಾತ; ಮುಂಡಾಜೆ ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಅಶೋಕ್ ಕುಮಾರ್ ಸಾವು

- Advertisement -
- Advertisement -

ಬೆಳ್ತಂಗಡಿ; ರಾಷ್ಟ್ರೀಯ ಹೆದ್ದಾರಿ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಿಗಲ್ ಎಂಬಲ್ಲಿ ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಾ. 7 ರಂದು ನಡೆದಿದೆ.ಮೃತ ಸವಾರನನ್ನು ಕಲ್ಮಂಜ ಗ್ರಾಮದ ಎಲ್ಲೆಂಗಿ ಮನೆ ನಿವಾಸಿ ಅಶೋಕ್ ಕುಮಾರ್(55) ಎಂದು ಗುರುತಿಸಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು ಆದ್ರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮುಂಡಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಹಾಲು ಉತ್ಪಾದಕ ಸಂಘಕ್ಕೆ  ಹೋಗುವಾಗ ಅಪಘಾತ ಸಂಭವಿಸಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!