Saturday, June 6, 2026
Homeಕರಾವಳಿಕಾಸರಗೋಡುಕಾಸರಗೋಡು; ಆಟವಾಡಲು ಹೋಗೋದಾಗಿ ಹೇಳಿ ಹೋದ ವಿದ್ಯಾರ್ಥಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು; ಆಟವಾಡಲು ಹೋಗೋದಾಗಿ ಹೇಳಿ ಹೋದ ವಿದ್ಯಾರ್ಥಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಕಾಸರಗೋಡು: ; ಆಟವಾಡಲು ಹೋಗೋದಾಗಿ ಹೇಳಿ ಹೋದ ವಿದ್ಯಾರ್ಥಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಾಸರಗೋಡು ಬೇಡಡ್ಕ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕುಂಡಂಗುಳಿ ನಿವಾಸಿ ವಿನೋದ್ ಮತ್ತು ಶಾಲಿನಿ ದಂಪತಿಯ ಪುತ್ರ ಅಭಿನವ್ (17)ಮೃತ ಬಾಲಕ.ಮಾ‌.7ರಂದು ಅಭಿನವ್ ಶಾಲೆಯಿಂದ ಮನೆಗೆ ಬಂದು ಸಂಜೆ ಆಟವಾಡಲು ಹೋಗುವುದಾಗಿ ಹೇಳಿ ಹೋಗಿದ್ದ.ಆ ಬಳಿಕ ಮನೆಗೆ ಬಂದಿಲ್ಲ.ಸಂಜೆಯಾದರೂ ವಾಪಸ್‌ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದಾರೆ.

ರಾತ್ರಿ 8 ಗಂಟೆ ಸುಮಾರಿಗೆ ಮನೆ ಸಮೀಪದ ಶಾಲೆಯ ಹಿಂದೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಬಾಲಕನ ಸಾವಿನ ಬಗ್ಗೆ ಆಘಾತಗೊಂಡು ಕುಟುಂಬ ಸಂಶಯವನ್ನು ವ್ಯಕ್ತಪಡಿಸಿದೆ.ಈ ಕುರಿತು ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!