Friday, June 5, 2026
Homeತಾಜಾ ಸುದ್ದಿಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ: ಸುಮಲತಾ ಅಂಬರೀಶ್

ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ: ಸುಮಲತಾ ಅಂಬರೀಶ್

- Advertisement -
- Advertisement -

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗ್ತಾರೆ ಎಂಬ ವದಂತಿಗೆ ಕೊನೆಗೂ ತೆರೆ ಬಿದ್ದಿದೆ. ಇಂದು ಮಂಡ್ಯದ ಚಾಮುಂಡೇಶ್ವರಿಯಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ ಎಂದು ಬಿಜೆಪಿಗೆ ಬಾಹ್ಯ ಬೆಂಬಲ ನೀಡುವ ಬಗ್ಗೆ ಬಹಿರಂಗವಾಗಿ ಘೋಷಿಸಿದ್ದಾರೆ.

ಬಿಜೆಪಿ ಪಕ್ಷ ಸೇರ್ಪಡೆಯಾದ್ರೆ ಸಂಸದೆ ಸ್ಥಾನದಿಂದ ಅನರ್ಹಗೊಳ್ಳಬೇಕಾಗುತ್ತೆ. ಈ ಕಾರಣದಿಂದ ಸುಮಲತಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಬದಲು ಬಾಹ್ಯ ಬೆಂಬಲ ನೀಡೋದಾಗಿ ಘೋಷಿಸಿದ್ದಾರೆ.

- Advertisement -

Latest News

error: Content is protected !!