Sunday, June 7, 2026
Homeಕರಾವಳಿಮಂಗಳೂರಿನಲ್ಲಿ ಫಲಾನುಭವಿಗಳ ಸಮ್ಮೇಳನಕ್ಕೆ ಸಿಎಂ ಚಾಲನೆ

ಮಂಗಳೂರಿನಲ್ಲಿ ಫಲಾನುಭವಿಗಳ ಸಮ್ಮೇಳನಕ್ಕೆ ಸಿಎಂ ಚಾಲನೆ

- Advertisement -
- Advertisement -

ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಇಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಫಲಾನುಭವಿಗಳ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಹಕಾರ ಸಚಿವರಾದ ಸೋಮಶೇಖರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಉಮಾನಾಥ್ ಕೋಟ್ಯಾನ್,ರಾಜೇಶ್ ನಾಯಕ್, ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮತ್ತು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಸೇರಿದಂತೆ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!