Tuesday, June 9, 2026
Homeಕರಾವಳಿಕಡಬ; ಕಾಡಾನೆ ಸೆರೆ ಹಿಡಿದು ಸಾಗಿಸುವ ವೇಳೆ ಅರಣ್ಯ ಹಾಗೂ ಪೊಲೀಸ್ ಇಲಾಖೆಯ ವಾಹನಗಳನ್ನು ಜಖಂಗೊಳಿಸಿದ...

ಕಡಬ; ಕಾಡಾನೆ ಸೆರೆ ಹಿಡಿದು ಸಾಗಿಸುವ ವೇಳೆ ಅರಣ್ಯ ಹಾಗೂ ಪೊಲೀಸ್ ಇಲಾಖೆಯ ವಾಹನಗಳನ್ನು ಜಖಂಗೊಳಿಸಿದ ಪ್ರಕರಣ; ಏಳು ಮಂದಿ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು

- Advertisement -
- Advertisement -

ಕಡಬ; ಕಾಡಾನೆ ಸೆರೆ ಹಿಡಿದು ಸಾಗಿಸುವ ವೇಳೆ ಅರಣ್ಯ ಹಾಗೂ ಪೊಲೀಸ್ ಇಲಾಖೆಯ ವಾಹನಗಳನ್ನು ಜಖಂಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಏಳು ಮಂದಿ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ದೊರಕಿದೆ. ಬಂಧಿತ ಏಳು ಮಂದಿಗೆ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಮೇಶ್ ಕರ್ಮಕಜೆ, ರಾಜೇಶ್ ಕರ್ಮಕಜೆ, ಜನಾರ್ದನ ರೈ ಕೊಲ್ಯ, ಕೋಕಿಲ ಕರ್ಮಕಜೆ, ತೀರ್ಥಕುಮಾರ ಕೊಲ್ಪೆ, ಗಂಗಾಧರ ಗೌಡ ಬಾರ್ಯ ಸಿರಿಬಾಗಿಲು ಮತ್ತು ಅಜಿತ್ ಕುಮಾರ್ ರೆಂಜಾಳ ಎಂಬವರನ್ನು ಕಡಬ ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಕೋರಿ ವಕೀಲರ ಮೂಲಕ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಅದರಂತೆ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿದೆ.

- Advertisement -

Latest News

error: Content is protected !!