Saturday, June 6, 2026
Homeಕರಾವಳಿಅಡಿಕೆಗೆ  ಸಹಾಯ ಧನ ವಿಸ್ತರಣೆಗೆ  ಕ್ರಮ:ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಅಡಿಕೆಗೆ  ಸಹಾಯ ಧನ ವಿಸ್ತರಣೆಗೆ  ಕ್ರಮ:ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

- Advertisement -
- Advertisement -

ಚಿತ್ರದುರ್ಗ::ಅಡಿಕೆ ಬೆಳೆಗೆ ಸಹಾಯ ಧನ ವಿಸ್ತರಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಸಿಎಂ, ಅಡಿಕೆ ಬೆಳೆಗೆ ಸಂಬಂಧಿಸಿದಂತೆ ಹನಿ ನೀರಾವರಿ ಜೊತೆಗೆ ಸೇರಿಸಬೇಕೆಂದು ರೈತರ ಒತ್ತಾಯ ಇದೆ ಎಂದು ಹೇಳಿದ್ದಾರೆ.

ಸಾಕಷ್ಟು ಯೋಜನೆ ಈಗಾಗಲೇ ಹನಿ ನೀರಾವರಿಯಡಿ ಇದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಶೇಕಡಾ 90 ರಷ್ಟು ಸಹಾಯಧನ ನೀಡಲಾಗುತ್ತಿದೆ. ಅಲ್ಲದೇ ತೋಟಗಾರಿಕೆಯಲ್ಲಿ ಅಡಿಕೆ ಸೇರಿದೆ ಎಂದು ಹೇಳಿರುವ ಬಸವರಾಜ ಬೊಮ್ಮಾಯಿ, ಸಾಮಾನ್ಯ ವರ್ಗದವರಿಗೆ ಶೇಕಡಾ 50 ರಿಂದ 75 ರಷ್ಟು ಹೆಚ್ಚಿಸಿದ್ದು, ವ್ಯಾಪ್ತಿ ವಿಸ್ತರಣೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!