Friday, June 5, 2026
Homeತಾಜಾ ಸುದ್ದಿನಾಳೆಯಿಂದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ

ನಾಳೆಯಿಂದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ

- Advertisement -
- Advertisement -

ಬೆಂಗಳೂರು: ನಾಳೆಯಿಂದ ಮಾರ್ಚ್ 30ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ  ಸಿಲಿಕಾನ್ ಸಿಟಿಯಲ್ಲಿ ನಡೆಯಲಿದೆ.  ಸಿಎಂ ಬಸವರಾಜ ಬೊಮ್ಮಾಯಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ನಾಳೆ ಸಂಜೆ 7 ಗಂಜೆಗೆ 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲು ಮೇಲೆ ಉದ್ಘಾಟನೆ ಮಾಡಲಿದ್ದಾರೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ವಿಧಾನಸೌಧದ ಮುಂಭಾಗದಲ್ಲಿ ಫಿಲ್ಮಂ ಫೆಸ್ಟಿವಲ್ ಉದ್ಘಾಟನೆಯ ಜೊತೆಗೆ ಚಲನಚಿತ್ರೋತ್ಸವ ಸ್ಮರಣ ಸಂಚಿಕೆ ಕೂಡ ಬಿಡುಗಡೆಯಾಗಲಿದೆ.ಮಾರ್ಚ್ 23ರ ನಾಳೆಯಿಂದ ಬೆಂಗಳೂರು ಫಿಲ್ಮಂ ಫೆಸ್ಟಿವೆಲ್ ಆರಂಭಗೊಂಡು ಮಾರ್ಚ್ 30ರವರೆಗೆ ಕನ್ನಡ ಸೇರಿದಂತೆ ಅಂತರರಾಷ್ಟ್ರೀಯ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ

- Advertisement -

Latest News

error: Content is protected !!