Thursday, June 4, 2026
Homeಕರಾವಳಿಉಡುಪಿಮಣಿಪಾಲ: ಗಾಂಜಾ ಸೇವನೆ: ಐವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ ‌

ಮಣಿಪಾಲ: ಗಾಂಜಾ ಸೇವನೆ: ಐವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ ‌

- Advertisement -
- Advertisement -

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಐವರು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿಖಿಲ್ ಎಂ. (22), ತನ್ವೀರ್ ರೆಡ್ಡಿ (25), ಶರಣ್ ಶೆಟ್ಟಿ (22), ರಾಹುಲ್ ಸೀಮಾ (21), ತುಶಾರ್ ಜಿ. (21) ಮಣಿಪಾಲ ಅಪಾರ್ಟ್‌ಮೆಂಟ್‌ವೊಂದರ ಬಳಿ ಗಾಂಜಾ ಸೇವಿಸುತ್ತಿದ್ದರು ಎನ್ನಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಇವರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!