Wednesday, June 3, 2026
Homeಕರಾವಳಿಕೊಣಾಜೆ: ತಾನು ಓಡಿಸುವ ಟ್ರ್ಯಾಕ್ಟರ್ ಗೆ ಬೈಕಿನಲ್ಲಿ ಡಿಕ್ಕಿ ಹೊಡೆದು ಚಾಲಕ ದುರ್ಮರಣ

ಕೊಣಾಜೆ: ತಾನು ಓಡಿಸುವ ಟ್ರ್ಯಾಕ್ಟರ್ ಗೆ ಬೈಕಿನಲ್ಲಿ ಡಿಕ್ಕಿ ಹೊಡೆದು ಚಾಲಕ ದುರ್ಮರಣ

- Advertisement -
- Advertisement -

ಉಳ್ಳಾಲ: ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಹಾಕುವಕಲ್ಲು ಪುಣ್ಯಕೋಟಿ ನಗರದ ಬಳಿ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಅದೇ ಟ್ರ್ಯಾಕ್ಟರ್ ಚಾಲಕನಾಗಿದ್ದು, ಸೋಮವಾರ ರಜೆ ತೆಗೆದುಕೊಂಡಿದ್ದು ಬದಲಿ ಚಾಲಕನನ್ನು ಕರೆಸಿಕೊಂಡಿದ್ದರು. ದುರದೃಷ್ಟವಶಾತ್ ಅದೇ ಟ್ರ್ಯಾಕ್ಟರ್ ನಡಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಪುಣ್ಯಕೋಟಿ ನಗರದ ಬಳಿಯ ಮನೆಯೊಂದರ ರಸ್ತೆ ಅಗೆಯುವ ಕೆಲಸ ನಿರ್ವಹಿಸಿದ ಬದಲಿ ಚಾಲಕ ಒಳರಸ್ತೆಯಿಂದ ಮುಡಿಪು ಮಂಜನಾಡಿ ಸಂಪರ್ಕ ರಸ್ತೆಗೆ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಂತೆಯೇ ಅದೇ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಗೆ ತಾಗಿದ್ದು ಅಪಘಾತದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟರು.

ಆದರೆ ಟ್ರ್ಯಾಕ್ಟರ್ ನಿಯಂತ್ರಣಕ್ಕೆ ಬಾರದೆ ಬೈಕ್ ಸವಾರನ‌ ತಲೆಯ ಮೇಲೆ ಚಲಿಸಿದ್ದು ಬೈಕ್ ಸವಾರ ದಾರುಣ ಸಾವನ್ನಪ್ಪಿದ್ದಾರೆ. ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

- Advertisement -

Latest News

error: Content is protected !!