Friday, July 4, 2025
Homeಅಪರಾಧಬಂಟ್ವಾಳ: ಕೆಎಸ್‌‌ಆರ್‌‌ಟಿಸಿ ಬಸ್ಸಿನಲ್ಲಿ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ- ನಿರ್ವಾಹಕ ದವಾಳ್ ಸಾಬ್ ಬಂಧನ

ಬಂಟ್ವಾಳ: ಕೆಎಸ್‌‌ಆರ್‌‌ಟಿಸಿ ಬಸ್ಸಿನಲ್ಲಿ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ- ನಿರ್ವಾಹಕ ದವಾಳ್ ಸಾಬ್ ಬಂಧನ

spot_img
- Advertisement -
- Advertisement -

ಬಂಟ್ವಾಳ : ಕೆಎಸ್‌‌ಆರ್‌‌ಟಿಸಿ ಬಸ್ಸಿನಲ್ಲಿ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಟ್ವಾಳ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ಬಸ್ ನಿವಾರ್ಹಕನನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ನಿವಾಸಿ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ನಿರ್ವಾಹಕ ದವಾಳ್ ಸಾಬ್ ಎಂಬಾತನನ್ನು ಬಂಧಿಸಲಾಗಿದ್ದು, ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿ ಶನಿವಾರ ಮಧ್ಯಾಹ್ನದ ವೇಳೆ ಶಾಲೆಯಿಂದ ಮನೆಗೆ ಕಲ್ಲಡ್ಕದಿಂದ ಬಿ.ಸಿ.ರೋಡಿಗೆ ಬರುವ ವೇಳೆ ನಿವಾರ್ಹಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಇನ್ನು ಪ್ರಕರಣ ದಾಖಲಾದ ಅರ್ಧ ಗಂಟೆಯಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೋಲಿಸ್ ಇನ್ಸ್ ಪೆಕ್ಟರ್ ವಿವೇಕಾನಂದ ನೇತೃತ್ವದಲ್ಲಿ ಬಂಟ್ವಾಳ ನಗರ ಠಾಣಾ ಎಸ್.ಐ. ರಾಮಕೃಷ್ಣ ಅವರ ತಂಡ ಬಂಧಿಸಿದೆ.

- Advertisement -
spot_img

Latest News

error: Content is protected !!