Thursday, June 4, 2026
Homeತಾಜಾ ಸುದ್ದಿಭರ್ಜರಿ ಉದ್ಯೋಗಾವಕಾಶ: ರಾಜ್ಯದಲ್ಲಿ 36,261 ಪೊಲೀಸ್ ಹುದ್ದೆಗೆ ನೇಮಕಾತಿ

ಭರ್ಜರಿ ಉದ್ಯೋಗಾವಕಾಶ: ರಾಜ್ಯದಲ್ಲಿ 36,261 ಪೊಲೀಸ್ ಹುದ್ದೆಗೆ ನೇಮಕಾತಿ

- Advertisement -
- Advertisement -

ಬೆಂಗಳೂರು: ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ನಿಯಮಗಳು 1978, ಕರ್ನಾಟಕ ರಾಜ್ಯ ಪೊಲೀಸ್ ಮಿನಿಸ್ಟೀರಿಯಲ್ ಸರ್ವಿಸಸ್ ನೇಮಕಾತಿ ತಿದ್ದುಪಡಿ ನಿಯಮಗಳು 2020 ರ ಅಡಿಯಲ್ಲಿ ರಾಜ್ಯದಲ್ಲಿ 36,261 ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ನಡೆಯಲಿದೆ.

ನೇಮಕಾತಿಗೆ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಪ್ರಕ್ರಿಯೆ ಮುಗಿದ ನಂತರ ಅಂತಿಮ ಅಧಿಸೂಚನೆ ಪ್ರಕಟವಾಗಲಿದೆ ಎಂದು ಹೇಳಲಾಗಿದೆ.

ಪೊಲೀಸ್ ಹುದ್ದೆಗಳಿಗೆ ಆಯ್ಕೆಯಾದವರಿಗೆ 23,500 ರೂಪಾಯಿಯಿಂದ 47,650 ರೂಪಾಯಿಯವರೆಗೆ ಸಂಬಳ ನಿಗದಿ ಮಾಡಲಾಗಿದೆ. ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಗೃಹ ಇಲಾಖೆ, ವಿಧಾನಸೌಧ, ಬೆಂಗಳೂರು – 1. ಇಲ್ಲಿಗೆ ಅಧಿಸೂಚನೆ ಪ್ರಕಟವಾದ 15 ದಿನದೊಳಗೆ ಆಕ್ಷೇಪಣೆ ಸಲ್ಲಿಕೆ ಮಾಡಬಹುದೆಂದು ಹೇಳಲಾಗಿದೆ.

- Advertisement -

Latest News

error: Content is protected !!