Thursday, June 4, 2026
Homeಕರಾವಳಿಬೆಳ್ತಂಗಡಿ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ, ಯುವಕ ಸಾವು

ಬೆಳ್ತಂಗಡಿ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ, ಯುವಕ ಸಾವು

- Advertisement -
- Advertisement -

ಬೆಳ್ತಂಗಡಿ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ಸೋಮವಾರ ಸಂಜೆ ನಡೆದಿದೆ.ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಮೃತ ದುರ್ದೈವಿ.

ಫಯಾಝ್ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಫಯಾಝ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

- Advertisement -

Latest News

error: Content is protected !!