Sunday, June 14, 2026
Homeತಾಜಾ ಸುದ್ದಿಹಿರಿಯ ನಟ ಶರತ್ ಬಾಬು ಸ್ಥಿತಿ ಚಿಂತಾಜನಕ ;ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

ಹಿರಿಯ ನಟ ಶರತ್ ಬಾಬು ಸ್ಥಿತಿ ಚಿಂತಾಜನಕ ;ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

- Advertisement -
- Advertisement -

ಚೆನ್ನೈ : ಹಿರಿಯ ನಟ ಶರತ್ ಬಾಬು ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಸ್ಥಿತಿ ಚಿಂತಾಜನಕವಾಗಿದೆ.  ಚೆನ್ನೈನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕನ್ನಡದ ಅಮೃತವರ್ಷಿಣಿ ಸಿನಿಮಾದಲ್ಲಿ ಅಭಿನಯಿಸಿದ್ದ ಶರತ್ ಬಾಬು ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರು ನಾಯಕ, ಖಳನಾಯಕ ಮತ್ತು ಪಾತ್ರ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ.

ಕನ್ನಡ ಅಲ್ಲದೇ, ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಹಲವು ಚಿತ್ರಗಳಲ್ಲಿ ನಟಿಸಿ ಉತ್ತಮ ನಟನೆಂದೇ ಖ್ಯಾತಿ ಗಳಿಸಿದ್ದಾರೆ. ಹಲವಾರು ವರ್ಷಗಳಿಂದ ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡಿದ್ದ ಶರತ್ ಬಾಬು ಇತ್ತೀಚೆಗೆ ಕಾಣಿಸಿಕೊಂಡಿರುವುದು ತೀರಾ ಕಡಿಮೆ. ಪ್ರಸ್ತುತ ಅವರು ಚೆನ್ನೈನಲ್ಲಿ ನೆಲೆಸಿದ್ದರು. ಇದೀಗ ಅನಾರೋಗ್ಯದಿಂದ ಬಳಲುತ್ತಿದ್ದು, ಅನೇಕ ಸಿನಿಮಾ ತಾರೆಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.

- Advertisement -

Latest News

error: Content is protected !!