Thursday, June 4, 2026
Homeತಾಜಾ ಸುದ್ದಿಇಂದು ಮತ್ತು ನಾಳೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಇಂದು ಮತ್ತು ನಾಳೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

- Advertisement -
- Advertisement -

ಬೆಂಗಳೂರು : ಇಂದು ಮತ್ತು ನಾಳೆ  ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಏಪ್ರಿಲ್ 1ರಂದು ಗುಡುಗು ಸಹಿತ ಮಳೆಯು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಕೋಲಾರ ಮತ್ತು ಕೊಡಗು ಜಿಲ್ಲೆಯಲ್ಲಿ ಆಗಲಿದೆ ಎಂದಿದೆ.

ಇನ್ನು ಏಪ್ರಿಲ್ 2ರ ನಾಡಿದ್ದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಮೈಸೂರು ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ. ಈ ಬಳಿಕ ಏಪ್ರಿಲ್ 3ರಿಂದ ಏಪ್ರಿಲ್ 5ರವರೆಗೆ ಮಳೆಯಿಲ್ಲ. ಎಂದಿನಂತೆ ಬಿಸಿಲ ವಾತಾವಣ ಮುಂದುವರೆಯಲಿದೆ ಎಂದು ತಿಳಿಸಿದೆ.

- Advertisement -

Latest News

error: Content is protected !!