Thursday, June 4, 2026
Homeತಾಜಾ ಸುದ್ದಿರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಹಲವರ ರಾಜೀನಾಮೆ; ರಾಜ್ಯ ನಾಯಕರ ವಿರುದ್ಧ ಹೈಕಮಾಂಡ್ ಗರಂ

ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಹಲವರ ರಾಜೀನಾಮೆ; ರಾಜ್ಯ ನಾಯಕರ ವಿರುದ್ಧ ಹೈಕಮಾಂಡ್ ಗರಂ

- Advertisement -
- Advertisement -

ಬೆಂಗಳೂರು : ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ  ಬಿಜೆಪಿಯ ಹಲವು ನಾಯಕರು ಬಿಜೆಪಿಗೆ ರಾಜೀನಾಮೆ ನೀಡಿ ಬೇರೆ ಪಕ್ಷಗಳಿಗೆ ಹೋಗುತ್ತಿದ್ದಾರೆ. ಹೀಗಾಗಿ ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್ ಗರಂ ಆಗಿದೆ ಎನ್ನಲಾಗಿದೆ.

ಶಾಸಕ ಎನ್‌.ವೈ ಗೋಪಾಲಕೃಷ್ಣ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆ ಆಗಿದ್ದರು. ಮಾಜಿ ಸಚಿವ ಎಬಿ ಮಾಲಕರೆಡ್ಡಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಹೀಗೆ ಒಬ್ಬೊಬ್ಬರಾಗಿ ಪಕ್ಷ ಬಿಡುತ್ತಿರುವುದಕ್ಕೆ ರಾಜ್ಯ ನಾಯಕರ ಮೇಲೆ ಬಿಜೆಪಿ ಹೈಕಮಾಂಡ್ ಗರಂ ಆಗಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿಯಿಂದ ಈ ಬಾರಿ 14 ಕ್ಕೂ ಹೆಚ್ಚು ಜನರು ವಲಸೆ ಹೋಗಿದ್ದಾರೆ. ಹೀಗಾಗಿ ಇದೀಗ ಪಕ್ಷ ಬಿಡುವುದಕ್ಕೆ ಕಾರಣ ಏನು ಎಂಬ ವರದಿ ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!