Thursday, June 4, 2026
Homeತಾಜಾ ಸುದ್ದಿಇಂದು ಬೆಳಿಗ್ಗೆ 11 ಗಂಟೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್

ಇಂದು ಬೆಳಿಗ್ಗೆ 11 ಗಂಟೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್

- Advertisement -
- Advertisement -

ನವದೆಹಲಿ: ಇಂದು ಬೆಳಿಗ್ಗೆ 11 ಗಂಟೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ಆಗಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಿದೆ. ಗುರುವಾರ ಬೆಳಿಗ್ಗೆ 11 ಗಂಟೆಯೊಳಗೆ 2ನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನಾವು ಈಗಾಗಲೇ 124 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದೇವೆ. ಆಡಳಿತಾರೂಢ ಬಿಜೆಪಿ ಇನ್ನೂ ಒಂದೇ ಒಂದು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ ಎಂದರು.

ಗುರುವಾರ  ಬೆಳಿಗ್ಗೆ 11 ಗಂಟೆಯೊಳಗೆ ಕಾಂಗ್ರೆಸ್ ನ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ. ಎರಡು ದಿನ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆದಿದೆ. ಎಐಸಿಸಿ ಅಧ್ಯಕ್ಷರು, ಕೆಪಿಸಿಸಿ ಅಧ್ಯಕ್ಷ ನೇತೃತ್ವದಲ್ಲಿ ನಡೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಭಾಗಿಯಾಗಿದ್ದರು ಎಂದಿದ್ದಾರೆ..

- Advertisement -

Latest News

error: Content is protected !!