Wednesday, June 3, 2026
Homeಕರಾವಳಿಉಡುಪಿಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಸಾದ್ ರಾಜ್ ಕಾಂಚನ್

ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಸಾದ್ ರಾಜ್ ಕಾಂಚನ್

- Advertisement -
- Advertisement -

ಉಡುಪಿ: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟವಾಗಿದೆ. ಉಡುಪಿ ಕ್ಷೇತ್ರಕ್ಕೆ ಪ್ರಸಾದ್ ರಾಜ್ ಕಾಂಚನ್ ಟಿಕೆಟ್ ಪಡೆದಿದ್ದಾರೆ. ಇಂದು ಪ್ರಕಟವಾದ ಎರಡನೇ ಪಟ್ಟಿಯಲ್ಲಿ ಒಟ್ಟು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಉಡುಪಿ ಮತ್ತು ಮಂಗಳೂರಿನಲ್ಲಿ ಹುಂಡೈ ವಾಹನ ಶೋರೂಂ ಮಾಲೀಕರಾಗಿರುವ ಪ್ರಸಾದ್ ರಾಜ್ ಕಾಂಚನ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪ್ತರಾಗಿದ್ದಾರೆ. ಈ ಬಾರಿ ಉಡುಪಿ ಕ್ಷೇತ್ರಕ್ಕೆ ಟಿಕೆಟ್ ಪಡೆದಿರುವ ಕಾಂಚನ್ 2018 ರಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ ಪ್ರಮೋದ್ ಮಧ್ವರಾಜ್ ಈಗ ಬಿಜೆಪಿಯಲ್ಲಿದ್ದಾರೆ.

- Advertisement -

Latest News

error: Content is protected !!