Thursday, June 4, 2026
Homeತಾಜಾ ಸುದ್ದಿಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಪ್ರಕರಣ; ಆರೋಪಿಯನ್ನು ಬಂಧಿಸಿದ ಪೊಲೀಸರು

ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಪ್ರಕರಣ; ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು: ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ 30 ಕ್ಕೂ ಅಧಿಕ ಮಂದಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪಿಯನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ನಗರದ ಬಿಜೈ ನ್ಯೂರೋಡ್ ಬಳಿಯ ನಿವಾಸಿ ಸುಧೀರ್ ರಾವ್ ವಿ.ಆರ್ (42) ಬಂಧಿತ.

                                                                                        
ಈತ ಬಲ್ಗೇರಿಯಾ ದೇಶದಲ್ಲಿ ಉದ್ಯೋಗ ಪಡೆಯಲು ವೀಸಾ ಕೊಡಿಸುವುದಾಗಿ ನಂಬಿಸಿ ಆರೋಪಿಯು ಉದ್ಯೋಗಾಕಾಂಕ್ಷಿಗಳಿಂದ ‌ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ. ಬಳಿಕ ಉದ್ಯೋಗದ ವೀಸಾವನ್ನು ಕೊಡಿಸದೇ, ಹಣವನ್ನೂ ಮರಳಿಸದೇ ವಂಚಿಸಿದ್ದ. ಈ ಬಗ್ಗೆ ಸುರತ್ಕಲ್‌, ಮಂಗಳೂರು ಪೂರ್ವ, ಮಂಗಳೂರು ದಕ್ಷಿಣ, ಕಂಕನಾಡಿ ನಗರ, ಮೂಡುಬಿದಿರೆ, ಬಂಟ್ವಾಳ ಠಾಣೆಗಳಲ್ಲಿ ಎಫ್‌ಐಆರ್‌ಗಳು ದಾಖಲಾಗಿದ್ದವು. ಆರೋಪಿಯು ಅನೇಕ ಸೋಸೈಟಿ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿದ್ದ. ಆತನಿಗೆ ಜಾಮೀನು ಹಾಕಿದವರೂ ಸಂಕಷ್ಟಕ್ಕೆ ಸಿಲುಕಿದ್ದರು’ ಎಂದು ಪೊಲೀಸ್‌ ಮೂಲಗಳು ತಿಳಿಸಿದ್ದಾರೆ.

‘ಆರೋಪಿಯು ಎಂಟಕ್ಕೂ ಅಧಿಕ ಪ್ರಕರಣಗಳಲ್ಲಿ ₹ 50 ಲಕ್ಷಕ್ಕೂ ಹೆಚ್ಚು ವಂಚನೆ ಮಾಡಿದ್ದಾನೆ’ ಎಂದು ಪೊಲೀಸ್‌ ಕಮಿಷನರ್‌ ಕುಲದೀಪ್‌ ಕುಮಾರ್ ಆರ್‌. ಜೈನ್‌ ತಿಳಿಸಿದರು. ಸಿಸಿಬಿಯ ಇನ್‌ಸ್ಪೆಕ್ಟರ್‌ ಶ್ಯಾಮ್ ಸುಂದರ್ ಎಚ್‌.ಎಂ ಹಾಗೂ ಪಿಎಸ್‌ಐ ಸುದೀಪ್ ಎಂ.ವಿ ಮತ್ತು ಸಿಬ್ಬಂದಿ ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು

- Advertisement -

Latest News

error: Content is protected !!