Saturday, August 29, 2026
Homeಕರಾವಳಿಮಂಗಳೂರು:ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯ ಬಂಧನ

ಮಂಗಳೂರು:ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಮಲ್ಪೆ ನಿವಾಸಿ ಸುಹಾನ್ ಎಸ್ ಪೂಜಾರಿ(23) ಬಂಧಿತ ಆರೋಪಿ.

ಸುಹಾನ್ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ್ಡದ ಪಡುಶೆಡ್ಡೆ ಬಳಿ ರಸ್ತೆ ಬದಿಯಲ್ಲಿ ಸ್ಕೂಟರ್‌ನಲ್ಲಿ ಕುಳಿತು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ 1.999 ಕೆಜಿ ಗಾಂಜಾ, ಮೊಬೈಲ್ ಮತ್ತು ಸ್ಕೂಟರ್ ನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈತನ ಹಿನ್ನೆಲೆ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!